Saturday, December 10, 2022

ಮತಪಟ್ಟಿ ಪ್ರಕರಣ: ಚಿಲುಮೆ ಸಂಸ್ಥಾಪಕ ರವಿಕುಮಾರ್ ಬಂಧನ, ಸಂಜೀವ್ ಶೆಟ್ಟಿ‌ ಪೊಲೀಸ್ ವಶಕ್ಕೆ

Follow Us

newsics.com

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್‌ರನ್ನು‌ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆ್ಯಪ್ ಅಭಿವೃದ್ಧಿಪಡಿಸಿದ್ದ ಸಂಜೀವ್ ಶೆಟ್ಟಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಪ್ರಮುಖ ಆರೋಪಿ ರವಿಕುಮಾರ್‌ರನ್ನು ಬಂಧಿಸುವಲ್ಲಿ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.

ರೇಣುಕಾಪ್ರಸಾದ್, ಧರ್ಮೇಶ್ ಬೆನ್ನಲ್ಲೇ ಕಂಪನಿ ನಿರ್ದೇಶಕರಾದ ಕೆಂಪೇಗೌಡ, ಐಶ್ವರ್ಯರನ್ನು ಪೊಲೀಸರು ಬಂಧಿಸಿದ್ದರು. ಭಾನುವಾರ ಡಿಜಿಟಲ್ ಸಮೀಕ್ಷಾ ಆಯಪ್ ಡೆವಲಪ್ ಮಾಡಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ‌ ಮಧ್ಯೆ, 2013ರಿಂದಲೂ ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಚಿಲುಮೆ ಸಂಸ್ಥೆಯ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ಕಾಡಾನೆ ದಾಳಿಗೆ ಮಹಿಳೆ ಬಲಿ- ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ

ಅಂತ್ಯಸಂಸ್ಕಾರದ ವೇಳೆ ಮೃತದೇಹಕ್ಕೆ ತಾಳಿ ಕಟ್ಟಿದ

ತಂದೆಯನ್ನೇ ಕೊಂದು 6 ತುಂಡುಗಳಾಗಿ ಕತ್ತರಿಸಿ ಬಿಸಾಡಿದ

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!