newsics.com
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್ ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆಪ್ ಗಳನ್ನು ಸ್ಥಗಿತಗೊಳಿಸಲಾಗಿದೆ.
ಇತ್ತೀಚೆಗಷ್ಟೇ ಸರ್ಕಾರ ಆನ್ ಲೈನ್ ಗೇಮ್, ಆನ್ ಲೈನ್ ಜೂಜು, ಬೆಟ್ಟಿಂಗ್ ಗೆ ನಿಷೇಧ ಹೇರಿತ್ತು. ಇದೀಗ ಆನ್ ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ. ಶಿಕ್ಷೆ ಪ್ರಮಾಣವನ್ನು ಕೂಡಾ ಹೆಚ್ಚಳ ಮಾಡಲಾಗಿದೆ.
ಕರ್ನಾಟಕ ಪೊಲಿಸ್ ಕಾಯ್ದೆ ಸೆಕ್ಸನ್ 2ಕ್ಕೆ ತಿದ್ದುಪಡಿ ತರಲಾಗಿದ್ದು, ಸೆಕ್ಸನ್ 78ಎ/3 ಪ್ರಕಾರ, ಈಗಿರುವ ಒಂದು ತಿಂಗಳ ಜೈಲು ಶಿಕ್ಷೆ ಪ್ರಮಾಣವನ್ನು 6 ತಿಂಗಳುಗಳಿಗೆ ವಿಸ್ತರಿಸಲಾಗಿದೆ. ಒಂದು ವರ್ಷದ ಶಿಕ್ಷೆ ಪ್ರಮಾಣವನ್ನು 3 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಈಗಿರುವ 500 ರೂ. ದಂಡ 10 ಸಾವಿರ ರೂ.ಗೆ ಹೆಚ್ಚಳವಾಗಿದ್ದು, ಈಗಿರುವ 1,000 ರೂ. ದಂಡವನ್ನು 1 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.