ಬೆಂಗಳೂರು: ಹಲವು ಆರೋಪಗಳ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಭಾಸ್ಕರ್ ರಾವ್ ಅವರ ಸ್ಥಾನಕ್ಕೆ ಆಂತರಿಕ ವಿಭಾಗದ ಎಡಿಜಿಪಿ ಆಗಿರುವ ಕಮಲ್ ಪಂತ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ. ಜುಲೈ 31 ಅಥವಾ ಆ.3 ರೊಳಗೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಎರಡು ಬಾರಿ ಭಾಸ್ಕರ ರಾವ್ ಅವರನ್ನು ಎತ್ತಂಗಡಿ ಮಾಡುವ ಪ್ರಯತ್ನ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ಎತ್ತಂಗಡಿ ಯತ್ನವನ್ನು ಕೈಬಿಡಲಾಗಿತ್ತು. ಆದರೆ ಈ ಬಾರಿ ಅಂತಹ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಇನ್ನು ಸಂಡೆ ಲಾಕ್ ಡೌನ್ ಇಲ್ಲ