Saturday, April 17, 2021

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಸೀಲ್ ಡೌನ್!

ಬೆಂಗಳೂರು: ಎಎಸೈ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯನ್ನೇ ಸೀಲ್ ಡೌನ್ ಮಾಡಲಾಗಿದೆ.
ಸ್ಯಾನಿಟೈಸ್ ಮಾಡಿ 3 ದಿನದ ನಂತರ ತೆರೆಯಲಾಗುವುದು ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ವಹಿಸುತ್ತಿದ್ದ ಎಟಿಎಸ್ ವಿಂಗ್ ನ ಎಎಸ್ಐಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಜೂನ್ 27 ರಿಂದ ಜೂನ್ 29ರವರೆಗೆ ಸೀಲ್ ಡೌನ್ ಮಾಡಲಾಗಿದೆ. ಕೇವಲ ಕಮಾಂಡ್ ಸೆಂಟರ್ ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸುಮಾರು 870 ಪೊಲೀಸರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದ್ದು, 90ಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!