Monday, April 12, 2021

ಕೊರೋನಾಗೆ ಸೋತ ಬೆಂಗಳೂರು ಪೊಲೀಸರು!

♦ ಬೆಂಗಳೂರಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರಿಗೆ ಕ್ವಾರಂಟೈನ್

ಬೆಂಗಳೂರು: ಕೊರೋನಾ ಸೋಂಕಿತರ ಭದ್ರತೆ, ಲಾಕ್ ಡೌನ್ ಸೆಕ್ಯೂರಿಟಿ… ಹೀಗೆ ಹೆಚ್ಚುತ್ತಲೇ ಇರುವ ಕೆಲಸದ ಒತ್ತಡದಿಂದ ಕಂಗಾಲಾಗಿದ್ದ ಬೆಂಗಳೂರು ಪೊಲೀಸ್ ಇಲಾಖೆಗೆ ಇದೀಗ ಕೊರೋನಾ ಸೋಂಕಿತರ ಸಂಖ್ಯೆಯೇ ತಲೆನೋವಾಗಿ ಪರಿಣಮಿಸಿದೆ. ಹೆಚ್ಚುತ್ತಿರುವ ಪೊಲೀಸರ ಕ್ವಾರಂಟೈನ್’ನಿಂದಾಗಿ ಇಲಾಖೆ ಸಿಬ್ಬಂದಿ ಕೊರತೆ ಎದುರಿಸುತ್ತಿದೆ.
ಸೋಂಕಿತರ ಭದ್ರತೆ, ಕಳ್ಳರನ್ನು ಬಂಧಿಸಿ ಪೊಲೀಸ್ ಠಾಣೆಯಲ್ಲಿ ಇಡೋದು ಸೇರಿದಂತೆ ಹಲವು ದಾರಿಗಳಿಂದ ನಗರದ ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಠಾಣೆಯ ಒಬ್ಬ ಸಿಬ್ಬಂದಿ ಸೋಂಕಿಗೆ ತುತ್ತಾದರೂ ಸಂಪೂರ್ಣ ಪೊಲೀಸ್ ಠಾಣೆಯನ್ನೇ ಸೀಲ್ ಡೌನ್ ಮಾಡುವ ಅನಿವಾರ್ಯತೆ ಇದೆ‌. ಹೀಗಾಗಿ ನಗರದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಗೆ ಒಳಗಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ಸಿಬ್ಬಂದಿ ಇಲ್ಲ ಎಂಬ ಸ್ಥಿತಿ ಎದುರಾಗಿದೆ.
ಇದುವರೆಗೂ ನಗರದ 8 ಪೊಲೀಸ್ ಠಾಣೆ ಹಾಗೂ ಸಿಸಿಬಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಪಿಎಸ್ ಐ ಸೇರಿದಂತೆ ಒಟ್ಟು ನೂರಾರು ಸಿಬ್ಬಂದಿ ಕೊರೋನಾಪೀಡಿತರಾಗಿದ್ದು ಹಲವರ ಪರೀಕ್ಷಾ ರಿಪೋರ್ಟ್’ಗಳು ಇನ್ನೂ ಬಾಕಿ ಇದೆ.
ಹೀಗಾಗಿ ನಗರ ಪೊಲೀಸ್ ಇಲಾಖೆ ಕಂಗಾಲಾಗಿದ್ದು, ಕೊರೋನಾದಂತಹ ಸೂಕ್ಷ್ಮ ಪರಿಸ್ಥಿತಿಯಲ್ಲೂ ಇರುವ ಸಿಬ್ಬಂದಿಯನ್ನೇ ಮತ್ತೆ ‌ಮತ್ತೆ ಕರ್ತವ್ಯಕ್ಕೆ ಬಳಸಿಕೊಳ್ಳುವ ಸ್ಥಿತಿ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!