Wednesday, July 6, 2022

ಹೋಂ ಕ್ವಾರಂಟೈನ್’ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ

Follow Us

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಡಾ.ಭಾಸ್ಕರ ರಾವ್ ಅವರು ಹೋಂ ಕ್ವಾರಂಟೈನ್​ ಆಗಿದ್ದಾರೆ.
ಭಾಸ್ಕರ ರಾವ್ ಅವರ ಕಾರು ಚಾಲಕನಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ಹೋಮ್ ಕ್ವಾರಂಟೈನ್ ಆಗಿರುವ ಭಾಸ್ಕರ್ ರಾವ್ ಅವರು ಮನೆಯಿಂದಲೇ ತಮ್ಮ ಸಿಬ್ಬಂದಿಗೆ ನಿರ್ದೇಶನ ನೀಡುತ್ತಿದ್ದಾರೆ. ಕಮಿಷನರ್ ಕಚೇರಿ ಸಿಬ್ಬಂದಿಗೆ ಕೊರೋನಾ ತಪಾಸಣೆ ಮಾಡಿದಾಗ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈಗ ಕಾರು ಚಾಲಕ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗ ಪೊಲೀಸ್ ಕಮಿಷನರ್ ಕಚೇರಿಯನ್ನೂ ಕಾಡುತ್ತಿದೆ. ಕೊರೋನಾ ಹರಡುವಿಕೆ ತಡೆಯಲು ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡಲಾಗಿದೆಯಾದರೂ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಆದರೂ ಜನರು ಲಾಕ್ ಡೌನ್ ಸಮಯದಲ್ಲೂ ಇಲ್ಲಸಲ್ಲದ ನೆಪ ಹೇಳುತ್ತಾ ತಿರುಗಾಡುತ್ತಲೆ ಇದ್ದಾರೆ. ಹೀಗಾಗಿ ಲಾಕ್ ಡೌನ್ ನೆಪಮಾತ್ರಕ್ಕೆ ಎಂಬಂತಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಲಿಂಗಾಯಿತ ಸಂಪ್ರದಾಯದಂತೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಲಾಗಿದೆ. ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಇಬ್ಬರು ಸ್ವಾಮೀಜಿಗಳು...

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್ ಪರವಾಗಿ ಹೋರಾಟ ಮಾಡುತ್ತಿದ್ದರು. ಬಂದೂಕು ಬಳಕೆಯಲ್ಲಿ...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...
- Advertisement -
error: Content is protected !!