newsics.com
ಬೆಂಗಳೂರು: ನಗರದ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. 247 ಆರೋಪಿಗಳನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.
ಹಿಂಸಾಚಾರದ ಹಿಂದೆ ವ್ಯವಸ್ಥಿತ ಸಂಚು ಅಡಗಿದೆ ಎಂಬ ಮಾಹಿತಿಯನ್ನು ಆರೋಪಪಟ್ಟಿಯಲ್ಲಿ ಬಹಿರಂಗಪಡಿಸಲಾಗಿದೆ. ಹೆಚ್ಚಿನ ಆರೋಪಿಗಳು ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆಯ ಜತೆ ನಂಟು ಹೊಂದಿರುವ ಅಂಶ ಆರೋಪಪಟ್ಟಿಯಲ್ಲಿ ಬಹಿರಂಗವಾಗಿದೆ.
ಯುಎಪಿಎ ಸೇರಿದಂತೆ ಕಠಿಣ ಕಾನೂನಿನ ಅಡಿಯಲ್ಲಿ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರದಲ್ಲಿ ವ್ಯಾಪಕ ಹಾನಿ ಸಂಭವಿಸಿತ್ತು. ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ನಾಶಮಾಡಿದ್ದರು.