ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೂಡಿಕೆದಾರರಿಗೆ ಭಾರೀ ಆಘಾತ ನೀಡಿದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಮಾಜಿ ಅಧ್ಯಕ್ಷರು ಸೇರಿದಂತೆ ಇತರ ಪದಾಧಿಕಾರಿಗಳಿಗೆ ಸೇರಿದ 45.32 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಾರಿ ನಿರ್ದೇಶನಾಲಯ ಈ ಕ್ರಮ ತೆಗೆದುಕೊಂಡಿದೆ.
ಇದರಲ್ಲಿ 38.16 ಕೋಟಿ ರೂಪಾಯಿ ಸ್ಥಿರಾಸ್ತಿಯಾಗಿದೆ. 7. 16 ಕೋಟಿ ರೂಪಾಯಿ ಬ್ಯಾಂಕ್ ಠೇವಣಿ ಮತ್ತು ಇನ್ನಿತರ ಹೂಡಿಕೆಗಳಾಗಿವೆ. 2016ರಿಂದ 2019ರ ಅವಧಿಯಲ್ಲಿ ಬ್ಯಾಂಕ್ ನಲ್ಲಿ 1500 ಕೋಟಿ ರೂಪಾಯಿ ಹಗರಣ ನಡೆದಿದೆ ಆರೋಪಿಸಲಾಗಿದೆ.
ತನಿಖೆ ಪ್ರಗತಿಯಲ್ಲಿರುವಾಗಲೇ ಬ್ಯಾಂಕ್ ನ ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದರು