Monday, October 3, 2022

ಬನ್ನೇರುಘಟ್ಟ ಆನೆ ಸುಂದರ್’ಗೆ ಬಗೆಬಗೆ ಹಣ್ಣಿನ ಭೋಜನ

Follow Us

newsics.com
ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಆನೇಕಲ್ ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ಸುಂದರ್‌ಗೆ ಬಗೆಬಗೆಯ ಹಣ್ಣುಗಳನ್ನು ನೀಡಲಾಯಿತು.
ಮಹಾರಾಷ್ಟ್ರದ ಕೊಲ್ಹಾಪುರದ ದೇವಾಲಯದಲ್ಲಿದ್ದ ಆನೆ ಸುಂದರ್‌ನನ್ನು ಪೇಟಾ ಸಂಸ್ಥೆ ಕಾನೂನು ಹೋರಾಟದ ಮೂಲಕ ಸಂರಕ್ಷಿಸಿ 2014ರಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹಸ್ತಾಂತರಿಸಿತ್ತು. 20 ವರ್ಷದ ಸುಂದರ್‌ 14 ವರ್ಷಗಳ ಕಾಲ ಯಾವುದೇ ಆನೆಗಳ ಸಂಪರ್ಕವಿಲ್ಲದೇ ಏಕಾಂಗಿಯಾಗಿ ಜನರೊಂದಿಗೆ ಬೆರೆತಿತ್ತು. 2014ರಲ್ಲಿ ಬನ್ನೇರುಘಟ್ಟ ಉದ್ಯಾನಕ್ಕೆ ಬಂದ ನಂತರ ಉದ್ಯಾನದ ಆನೆಗಳೊಂದಿಗೆ ಹೊಂದಿಕೊಳ್ಳಲು ಅತ್ಯಂತ ಪ್ರಯಾಸಪಡುತ್ತಿತ್ತು. ಆನೆಯನ್ನು ಪಳಗಿಸುವ ಮತ್ತು ಇತರ ಆನೆಗಳೊಂದಿಗೆ ಬೆರೆಯುವ ನಿಟ್ಟಿನಲ್ಲಿ ಮಾವುತರು ಹಲವು ಪ್ರಯತ್ನಗಳನ್ನು ನಡೆಸಿದ ಪರಿಣಾಮವಾಗಿ ನಿಧಾನವಾಗಿ ಆನೆ ಸುಂದರ್‌ ಉದ್ಯಾನಕ್ಕೆ ಹೊಂದಿಕೊಳ್ಳುತ್ತಿರುವುದು ಉದ್ಯಾನದ ಸಿಬ್ಬಂದಿಯಲ್ಲಿ ಸಂತಸ ತಂದಿದೆ.
ದೀಪಾವಳಿ ಅಂಗವಾಗಿ ಪೇಟಾ ಸಂಸ್ಥೆಯ ಮಾರ್ಗದರ್ಶನದಲ್ಲಿ ಸುಂದರ್‌ಗೆ ಹಲವು ಬಗೆಯ ಹಣ್ಣುಗಳಾದ ಕಲ್ಲಂಗಡಿ, ಸೇಬು, ಬಾಳೆಹಣ್ಣು, ಅನಾನಸ್, ಕ್ಯಾರೆಟ್‌ ಸೇರಿದಂತೆ ವಿವಿಧ ಬಗೆಯ ಹಣ್ಣು ಮತ್ತು ತರಕಾರಿಗಳಿಂದ ದೀಪದ ಮಾದರಿಯಲ್ಲಿ ಸಿದ್ಧಗೊಳಿಸಿ ಸುಂದರ್‌ನಿಗೆ ನೀಡಿ ಪುಷ್ಟೀಕರಣ ಮಾಡಲಾಯಿತು ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

ಅಕ್ಷರ ಬೆಳೆಗಾರ

ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಹೈಕೋರ್ಟ್ ಅನುಮತಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!