Monday, April 12, 2021

ಕೊರೋನಾ ವೇಳೆ ರೋಡ್ ಶೋ, ಕಾರ್ಪೊರೇಟರ್ ಇಮ್ರಾನ್ ಬಂಧನ

♦ ಜೆ.ಜೆ. ನಗರ ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಶಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅದ್ದೂರಿ ರೋಡ್ ಶೋ ನಡೆಸಿದ ಆರೋಪದ ಮೇಲೆ ಬಂಧಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಡಾ.ಭಾಸ್ಕರ್ ರಾವ್ ತಿಳಿಸಿದ್ದಾರೆ. ಇಮ್ರಾನ್ ಅವರನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ಕ್ವಾರಂಟೈನ್ ಗೆ ಒಳಪಡಿಸಿದ್ದಾರೆ. ಅಲ್ಲದೆ ಜೆ.ಜೆ. ನಗರ ಠಾಣೆ ವ್ಯಾಪ್ತಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 144 ಸೆಕ್ಷನ್ ಜಾರಿಗೊಳಿಸಿರುವುದಾಗಿ ಪ್ರಕಟಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾದರಾಯನಪುರ ಸುತ್ತಮುತ್ತ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ರೋಡ್ ಶೋಗೆ ಅನುಮತಿ ಕೊಟ್ಟಿದ್ದು ಯಾರು ಎಂದು ಇಮ್ರಾನ್ ಪಾಷಾ ಅವರನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಇಮ್ರಾನ್ ಪಾಶಾಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಮೆರವಣಿಗೆ ತಡೆದು ಮನೆಗೆ ಹೋಗುವಂತೆ ತಾಕೀತು ಮಾಡಿದ್ದರು. ಆದರೆ ಇದನ್ನು ಧಿಕ್ಕರಿಸಿ 150 ಕ್ಕೂ ಹೆಚ್ಚು ಬೈಕ್ ಗಳ ಜತೆ ರೋಡ್ ಶೋ ಮುಂದುವರಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಂಧಿಸಿರುವುದಾಗಿ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಪಾದರಾಯನಪುರ ವಾರ್ಡ್ ಕಾರ್ಪೋರೇಟರ್ ಇಮ್ರಾನ್ ಪಾಶಾ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದು ಸಾಮಾಜಿಕ ಅಂತರ ನಿರ್ಲಕ್ಷಿಸಿ ಮೆರವಣಿಗೆ ನಡೆಸಲಾಗಿತ್ತು.
ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳದೇ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ಮಾಡಿದ್ದು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ಪೊಲೀಸರು ವಾರ್ನಿಂಗ್ ಮಾಡಿ, ಮೆರವಣಿಗೆಯಲ್ಲಿದ್ದವರನ್ನು ಚದುರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!