Wednesday, October 5, 2022

ಬಿಬಿಎಂಪಿ ಚುನಾವಣೆ; ನ.19ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Follow Us

newsics.com
ಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ನಿಗದಿತ ಸಮಯದಲ್ಲಿ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅಂತಿಮ ತೀರ್ಪನ್ನು ನ.19ಕ್ಕೆ ಕಾಯ್ದಿರಿಸಿದೆ.
ಸಕಾಲಕ್ಕೆ ಚುನಾವಣೆ ನಡೆಸಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜ್, ಅಬ್ದುಲ್ ವಾಜೀದ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ವಿಭಾಗೀಯ ಪೀಠ ತೀರ್ಪನ್ನು ನ.19ಕ್ಕೆ ಕಾಯ್ದಿರಿಸಿದ್ದು ಬಿಬಿಎಂಪಿ ಚುನಾವಣೆ ಭವಿಷ್ಯ ಅಂದು ನಿರ್ಧಾರವಾಗಲಿದೆ.
ಬಿಬಿಎಂಪಿ ವಾರ್ಡ್‍ಗಳನ್ನು 250ಕ್ಕೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಮಸೂದೆ ಜಾರಿ ಮಾಡಲಾಗಿದೆ. ಪರಿಷ್ಕರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಾಲಾವಧಿ ಬೇಕಾಗುತ್ತದೆ. ಹಾಗಾಗಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸಮಯಾವಕಾಶ ಕೋರಿ ಸರ್ಕಾರ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಿತ್ತು. ಈಗಾಗಲೇ ವಾರ್ಡ್ ಪುನರ್ ವಿಂಗಡಣೆ ಮಾಡಿ ಮೀಸಲಾತಿ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದ್ದು ಅದರಂತೆ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!