ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಓಡಾಡುವ ಪ್ರಯಾಣಿಕರ ಗಮನಕ್ಕೆ, ಜನವರಿ 27ರಿಂದ 4 ದಿನ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ವಿಸ್ತರಣಾ ಮಾರ್ಗದಲ್ಲಿ ಕಾಮಗಾರಿ ನಡೆಯಲಿರುವ ಹಿನ್ನಲೆ ನೇರಳೆ ಮಾರ್ಗದ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿವರೆಗೆ ಮೆಟ್ರೋ ರೈಲುಗಳ ಓಡಾಡವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯ ಇರಲಿದೆ. ಜನವರಿ 31ರಿಂದ ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗೆ ಎಂದಿನಂತೆ ಮೆಟ್ರೋ ರೈಲು ಸೇವೆ ಲಭ್ಯವಿರಲಿದೆ.
ವಿರುದ್ಧವಾಗಿ ಬಂದ ತೀರ್ಪು: ರೊಚ್ಚಿಗೆದ್ದು 40ಕ್ಕೂ ಹೆಚ್ಚು ಬಾರಿ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ