Monday, November 29, 2021

ಡಿಸಿಎಂ ಮಾತಿಗೆ ನೊಂದ ಭಾಸ್ಕರ್ ರಾವ್; ಹುದ್ದೆ ತ್ಯಾಗ ಇಂಗಿತ

Follow Us

ಬೆಂಗಳೂರು: ಡಿಸಿಎಂ ಅಶ್ವತ್ಥನಾರಾಯಣ ಅವರ ಗಂಭೀರ ಆರೋಪದಿಂದ ಮನನೊಂದ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಕಣ್ಣೀರಿಡುತ್ತಾ ಸಿಎಂ ಯಡಿಯೂರಪ್ಪ ನಡೆಸುತ್ತಿದ್ದ ಸಭೆಯಿಂದ ಅರ್ಧದಲ್ಲೇ ಎದ್ದು ಹೋದ ಪ್ರಸಂಗ ಗುರುವಾರ ನಡೆದಿದೆ.
ಸಿಎಂ ಯಡಿಯೂರಪ್ಪನವರು ಕರೆದಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಘಟನೆ ನಡೆದಿದೆ. ಸೂಪರ್ ಮಾರ್ಕೆಟ್ ನವರಿಂದ ಹಣ ಪಡೆದು ಪೊಲೀಸ್ ಆಯುಕ್ತರು ಸೂಪರ್ ಮಾರ್ಕೆಟ್ ತೆಗೆಯಲು ಅವಕಾಶ ನೀಡಿದ್ದಾರೆ ಎಂದು ಅಶ್ವಥ್ ನಾರಾಯಣ್ ಅವರು ಮಾತಿನ ಜಟಾಪಟಿ ನಡುವೆ ಆರೋಪಿಸಿದರು. ಇದಕ್ಕೆ ಭಾಸ್ಕರ್ ರಾವ್ ಅವರು ನಿಮ್ಮ ಬಳಿ ಸಾಕ್ಷಿ ಇದೆ ತೋರಿಸಿ ಎಂದು ಪ್ರತಿ ಸವಾಲು ಹಾಕಿದರು. ಇದಕ್ಕೆ ಅಶ್ವತ್ ನಾರಾಯಣ ನಮ್ಮ ಬಳಿ ವಿಡಿಯೋ ಸಾಕ್ಷಿ ಇದೆ ಎಂದರು.
ಪಾಸ್ ವಿತರಣೆ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಆನ್ ಲೈನ್ ಫುಡ್ ಡೆಲಿವಿರಿ ಕಂಪನಿಯ ಸಿಬ್ಬಂದಿಗೆ ಹೆಚ್ಚು ಪಾಸ್ ನೀಡುವಂತೆ ಅಶ್ವಥ್ ನಾರಾಯಣ ಕೇಳಿದರೂ ಇದಕ್ಕೆ ಭಾಸ್ಕರ್ ರಾವ್ ಅವರು ಒಪ್ಪದ ಕಾರಣ ನಂತರ ಅಶ್ವಥ್ ನಾರಾಯಣ ಅವರು ಏಕವಚನದಲ್ಲಿ ಮಾತನಾಡಿದರು.
ಇದರಿಂದ ಭಾವುಕರಾದ ಭಾಸ್ಕರ್ ರಾವ್ ಅವರು ಕಣ್ಣೀರಿಡುತ್ತಾ ಹೊರಬಂದರು. ಸಿಎಂ ಅವರೇ ಸಮಾಧಾನಪಡಿಸಲು ಯತ್ನಿಸಿದರು. ಆಗ ‘ಸಾರ್ ಐ ಯಾಂ ಡಿಸ್ಟರ್ಬ್ಡ್, ಪ್ಲೀಸ್ ನನ್ನನ್ನು ಸೇವೆಯಿಂದ ಬಿಡುಗಡೆ ಮಾಡಿ’ ಎಂಬುದಾಗಿ ಮನವಿ ಮಾಡಿ ಹೊರಬಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!