ಚಾಮರಾಜನಗರ:14 ವರ್ಷದ ಬಾಲಕಿಯೊಬ್ಬಳು ನಗರದ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಬಾಲಕಿ 2.7 ಕೆಜಿಯ ಮಗುವಿಗೆ ಜನ್ಮ ನೀಡಿದ್ದಾಳೆ. ಇದು ಸಹಜ ಹೆರಿಗೆಯಾಗಿದ್ದು, ಆಕೆ ಅಪ್ರಾಪ್ತೆಯಗಿರುವುದರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಆಸ್ಪತ್ರೆ ಆಡಳಿತಾಧಿಕಾರಿ ತಿಳಿಸಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬಾಲಕಿಗೆ ನೆರೆ ಮನೆಯ ಪುರುಷನೊಬ್ಬ ಏಳೆಂಟು ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು ಎಂದು ಮೂಲಗಳು ತಿಳಿಸಿವೆ.
ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
Follow Us