ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಬಿಸಿ ಆರುವ ಮೊದಲೇ ಬಿಸಿಯೂಟ ಕಾರ್ಯಕರ್ತೆಯರು ಬೀದಿಗಿಳಿದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಬಿಸಿಯೂಟ ಕಾರ್ಯಕರ್ತೆಯರು ಮಂಗಳವಾರ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಫ್ರೀಡಂ ಪಾರ್ಕ್ ನಲ್ಲಿ 2 ದಿನ ಅಹೋರಾತ್ರಿ ಧರಣಿಯನ್ನೂ ನಡೆಸಲಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯಿಂದಾಗಿ ರಾಜ್ಯ ರಾಜಧಾನಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಸಿಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರು, ಕನಿಷ್ಠ ವೇತನ, ಉದ್ಯೋಗ ಭದ್ರತೆ, ಬಿಸಿಯೂಟ ಯೋಜನೆ ಖಾಸಗಿಯವರಿಗೆ ನೀಡಬಾರದು, ಕಾರ್ಮಿಕ ಕಾಯ್ದೆ ವ್ಯಾಪ್ತಿಗೆ ತಮ್ಮನ್ನು ಸೇರಿಸಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿವೆ.
ಬೆಂಗಳೂರಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಬಿಸಿ
Follow Us