Saturday, April 17, 2021

ರಾಜ್ಯಸಭಾ ಚುನಾವಣೆ: ಇಂದು ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಇಂದು ನಡೆಯಲಿದೆ.  ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳನ್ನು ಕೋರ್ ಕಮಿಟಿ ಸಭೆ ಅಂತಿಮಪಡಿಸಲಿದೆ. ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ಟಿಕೇಟ್ ಗೆ ಪಕ್ಷದಲ್ಲಿ ಪ್ರಬಲ ಪೈಪೋಟಿ ಏರ್ಪಟ್ಟಿದೆ.  ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ.. ಪ್ರಭಾಕರ್ ಕೋರೆ ಮರು ಆಯ್ಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.  ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಕೂಡ ರೇಸ್ ನಲ್ಲಿದ್ದಾರೆ. ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ಕೇಳಿ ಬರುತ್ತಿದೆ. ಇಂದಿನ ಸಭೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಿದ್ದು, ಅಂತಿಮ ನಿರ್ಧಾರ ಬಿಜೆಪಿ ವರಿಷ್ಟ ಮಂಡಳಿ ಕೈಗೊಳ್ಳಲಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!