newsics.com
ಬೆಂಗಳೂರು: ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ.
ಡಿಸೆಂಬರ್ 15ರಂದು ನಡ್ಡಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಗಳ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಚುನಾವಣಾ ತಂತ್ರಗಾರಿಕೆ ಸಂಬಂಧ ರಾಜ್ಯದ ಹಿರಿಯ ನಾಯಕರ ಜತೆ ನಡ್ಡಾ ಅವರು ಸಮಾಲೋಚನೆ ನಡ಼ೆಸಲಿದ್ದಾರೆ.
ಯೋಜನೆಗಳ ಫಲಾನುಭವಿಗಳು ಮತ್ತು ಜಾತಿ ಆಧಾರಿತ ಸಮಾವೇಶಕ್ಕೆ ಆದ್ಯತೆ ನೀಡಲು ಬಿಜೆಪಿ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ