Wednesday, October 5, 2022

ಆರ್.ಆರ್.ನಗರ, ಶಿರಾದಲ್ಲಿ ಬಿಜೆಪಿ ಜಯಭೇರಿ; ಕನ್ನಡದಲ್ಲೇ ಮೋದಿ ಶುಭಹಾರೈಕೆ

Follow Us

newsics.com
ನವದೆಹಲಿ: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎರಡೂ ಕಡೆ ಬಿಜೆಪಿ ಜಯ ಗಳಿಸುವ ಮೂಲಕ ರಾಜ್ಯದ ಸರ್ಕಾರವನ್ನು ಮತ್ತಷ್ಟು ಬಲಪಡಿಸಿವೆ.
ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ ಸರ್ಕಾರವನ್ನು ಅಭಿನಂದಿಸಿದ್ದಾರೆ. ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಲಾಗಿದೆ.
ಪ್ರಧಾನಿ ಮೋದಿ ತಮ್ಮ ಟ್ವೀಟ್ ನಲ್ಲಿ, ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃ ದೃಢೀಕರಿಸುತ್ತದೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಅಭಿನಂದನೆ ಸಲ್ಲಿಸಿದ್ದು, ‘ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಹಾಗೂ ಕರ್ನಾಟಕ ಬಿಜೆಪಿಯ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ’ ಎಂದು ಅಮಿತ್ ಶಾ ಹೇಳಿದ್ದಾರೆ.

ಕೊರೋನಾಗೆ ಪೆಲೆಸ್ತೀನ್‌ನ ರಾಜತಾಂತ್ರಿಕ ಸಾಯಿಬ್ ಬಲಿ

ಕಾಲುವೆಗೆ ಉರುಳಿದ ಕಾರು; ಮೂವರು ನೀರುಪಾಲು

ಮುಂಬೈಗೆ ಐಪಿಎಲ್ ಚಾಂಪಿಯನ್ ಗರಿ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!