newsics.com
ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನೋಡಬೇಕೆಂಬ ಆಸೆಯಿಂದ ಬಂದಿದ್ದ ಬಾಲಕನೊಬ್ಬ ಪೊಲೀಸ್ ದೌರ್ಜನ್ಯಕ್ಕೊಳಗಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರಿನಲ್ಲಿ ಶನಿವಾರ ನಡೆದ ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೂ ಮುನ್ನ ಈ ಘಟನೆ ನಡೆದಿ್ಎ.
ಮುಖ್ಯಮಂತ್ರಿಯನ್ನು ನೋಡಲು ಬಂದ ಬಾಲಕನ ತಲೆಗೆ ಪೊಲೀಸ್ ಸಿಬ್ಬಂದಿಯೊಬ್ಬರು ಟೋಪಿಯಿಂದ ಹೊಡೆದಿದ್ದರಿಂದ ಗಾಯವಾಗಿ ರಕ್ತ ಸುರಿದಿದೆ.
ನಾನು ಹೊಡೆದಿಲ್ಲ. ಬಾಲಕನೇ ಇತರರೊಡನೆ ಗಲಾಟೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಸಿಬ್ಬಂದಿ ಹೇಳಿದ್ದರು. ಬಳಿಕ ಇದೊಂದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ.
ಕೇರಳದಲ್ಲಿ ಭಾರೀ ಮಳೆ, ಹಲವೆಡೆ ಪ್ರವಾಹ, ಜನಜೀವನ ಅಸ್ತವ್ಯಸ್ತ, ಜನರ ಪರದಾಟ