newsics.com
ಬೆಂಗಳೂರು: ಬೆಳಗಾವಿ ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ಗಡಿ ವಿಷಯದಲ್ಲಿ ಶಾಂತಿ ಕಾಪಾಡಬೇಕಾದ ಅಗತ್ಯವನ್ನು ಸಿಎಂ ಬೊಮ್ಮಾಯಿ ಒತ್ತಿ ಹೇಳಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಸಿಎಂ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಂಡಿದ್ದು ಗಡಿಯಲ್ಲಿ ವಾಸಿಸುತ್ತಿರುವ ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ.
ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ನೇತೃತ್ವದ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ರಾಜ್ಯದ ಬಸ್ ಗಳಿಗೆ ಮತ್ತೆ ಮಸಿ ಬಳಿದಿದ್ದಾರೆ.