newsics.com
ಬೆಳಗಾವಿ: ಗಡಿ ವಿವಾದ ಕೆದಕಿರುವ ಮಹಾರಾಷ್ಟ್ರದ ವಿರುದ್ಧ ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ನೋಂದಣಿ ಹೊಂದಿರುವ ವಾಹನಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.
ಕೆಲವು ಲಾರಿಗಳ ಮೇಲೆ ಕಲ್ಲು ತೂರಾಟ ಕೂಡ ನಡೆಸಲಾಗಿದೆ. ಸ್ಥಳದಲ್ಲಿ ಇದೀಗ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದೇ ವೇಳೆ ಮಸಿ ಬಳಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.