Wednesday, July 6, 2022

ತಂಗಿ ಚುಡಾಯಿಸಿದ್ದಕ್ಕೆ ಚಾಕುವಿನಿಂದ ಇರಿದ ಅಣ್ಣಂದಿರು

Follow Us

newsics.com

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂಗಿಯನ್ನು ಚುಡಾಯಿಸಿದ ಕಾರಣಕ್ಕಾಗಿ ಯುವಕನಿಗೆ ಯುವತಿಯ ಅಣ್ಣಂದಿರಿಬ್ಬರು ಚಾಕುವಿನಿಂದ ಮನಬಂದಂತೆ ಇರಿದಿದ್ದಾರೆ.

ಹಳೆ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಧಾರವಾಡ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಚಂದ್ರಶೇಖರ್ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ.

ಇರಿತಕ್ಕೊಳಗಾದ ಚಂದ್ರಶೇಖರ್ ಅದೇ ನಗರದ ಕಿರಣ್ ಹಾಗೂ ಅಭಿ ಎನ್ನುವವರ ತಂಗಿಯನ್ನು ಚುಡಾಯಿಸಿದ್ದನು. ಈ ವಿಚಾರವಾಗಿ ಇಬ್ಬರು ಅಣ್ಣಂದಿರೂ ಚಂದ್ರಶೇಖರ್‌ಗೆ ಬುದ್ಧಿವಾದ ಹೇಳಲು ಮುಂದಾಗಿದ್ದಾರೆ. ಎಷ್ಟು ಹೇಳಿದರೂ ಕೇಳದೇ ಇದ್ದರಿಂದ ಕೋಪಗೊಂಡ ಇಬ್ಬರು ಚಂದ್ರಶೇಖರ್‌ಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರ ಗಾಯಗೊಂಡಿರುವ ಚಂದ್ರುವನ್ನು ಕುಟುಂಬಸ್ಥರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿಸುತ್ತಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಲ್ಡೀವ್ಸ್‌ನಲ್ಲಿ ನಿರ್ಮಾಣವಾಗುತ್ತಿದೆ ತೇಲುವ ನಗರ!

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!