ಕಮಲಾಪುರ: ಕಲಬುರ್ಗಿ ಜಿಲ್ಲೆಯ ಕಮಲಾಪುರದಲ್ಲಿ ದಂಪತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮೃತಪಟ್ಟವರನ್ನು ಮಾರುತಿ ಮತ್ತು ಅವರ ಪತ್ನಿ ಶಾರದಾ ಭಾಯಿ ಎಂದು ಗುರುತಿಸಲಾಗಿದೆ.
ಕಮಲಾಪುರದ ದಿನಸಿ ತಾಂಡದಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ