Wednesday, May 25, 2022

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ: ನಾಳೆ ರೈತ ಸಂಘಟನೆಗಳಿಂದ ಬಂದ್ ಕರೆ

Follow Us

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕೃಷಿ ಮಸೂದೆ ವಿರೋಧಿಸಿ ಹಲವು ರೈತ ಸಂಘಟನೆಗಳು, ಕನ್ನಡ ಪರ  ಸಂಘಟನೆಗಳು ನಾಳೆ ರಾಜ್ಯ ಬಂದ್ ಗೆ ಕರೆ ನೀಡಿವೆ. ಬೆಂಗಳೂರಿನಲ್ಲಿ ಅಟೋ ಚಾಲಕರು ಬಂದ್ ಗೆ  ಬೆಂಬಲ ಘೋಷಿಸಿದ್ದಾರೆ.

ರಾಜ್ಯ ಸರ್ಕಾರ  ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈ ಬಿಡಬೇಕು ಎಪಿಎಂಸಿ ಗಳ ಹಿತರಕ್ಷಣೆ ಮಾಡಬೇಕು  ಎಂದು ರೈತ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ. ಬಂದ್   ಕೈಬಿಡುವಂತೆ ರಾಜ್ಯ ಸರ್ಕಾರ ಮಾಡಿರುವ ಮನವಿಯನ್ನು ರೈತ ಮುಖಂಡರು ತಳ್ಳಿಹಾಕಿದ್ದಾರೆ.

ಇದೇ ವೇಳೆ ಬಿಎಂಟಿಸಿ ಸೇರಿದಂತೆ ಎಲ್ಲ ವಿಭಾಗಗಳ  ಬಸ್ ಸಂಚಾರ ಎಂದಿನಂತೆ ಇರಲಿದೆ ಎಂದು ಸಾರಿಗೆ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ. ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಕೂಡ ನಾಳೆ ಬಂದ್ ಕರೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಬಂದ್ ಕರೆ ಹಿನ್ನೆಲೆಯಲ್ಲಿ ನಾಳೆ ನಡೆಸಲು ಉದ್ದೇಶಿಸಲಾಗಿದ್ದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.  ಬೆಂಗಳೂರಿನಲ್ಲಿ ಮೌರ್ಯ ಸರ್ಕಲ್ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನೆ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!