newsics.com
ರಾಯಚೂರು: ರಾಜ್ಯದ ರಾಯಚೂರು ತಾಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಸ್ಕಿ ಸಮೀಪದ ಗುಡದೂರು ಬಳಿ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ನಾಗರಾಜ, ಜಯಪಾಲ ಮತ್ತು ಸೀನ ಎಂದು ಗುರುತಿಸಲಾಗಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ
ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡುತ್ತಿದೆ ಹನ್ಸಿಕಾ ಮೊಟ್ವಾನಿ ಮದುವೆ ಫೋಟೋಗಳು