Thursday, June 17, 2021

ತೌಕ್ತೆ ಅವಾಂತರ: ಬೆಳಗಾವಿಯಲ್ಲಿ ವಿಮಾನಗಳ ಹಾರಾಟ ರದ್ದು

newsics.com

ಬೆಳಗಾವಿ: ‘ತೌಕ್ತೆ’ ಚಂಡಮಾರುತ ಪರಿಣಾಮ ಜೋರು ಗಾಳಿ ಸಮೇತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ.

ಪ್ರತಿಕೂಲ ವಾತಾವರಣ ಹಿನ್ನೆಲೆಯಲ್ಲಿ ಹೈದರಾಬಾದ್ ಹಾಗೂ ತಿರುಪತಿ ವಿಮಾನಗಳ ಹಾರಾಟ ರದ್ದಾಗಿದೆ.

ಪರಿಸ್ಥಿತಿ ಅವಲೋಕಿಸಿ ಮುಂದಿನ ವಿಮಾನಗಳ ಹಾರಾಟದ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ತಿಳಿಸಿದ್ದಾರೆ.

ತೌಕ್ತೆ ಅಬ್ಬರ: ರಾಜ್ಯದಲ್ಲಿ ನಾಲ್ವರ ಸಾವು, 112 ಮನೆ ನಾಶ, 6 ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!