Saturday, April 17, 2021

ಕಂಟೇನ್ಮೆಂಟ್ ಜೋನ್ ರದ್ದು, ಸೋಂಕಿತರ ಮನೆಯೇ ಸೀಲ್ ಡೌನ್- ಸರ್ಕಾರ ನಿರ್ಧಾರ

ಮಂಗಳೂರು: ಇನ್ನು ಮುಂದೆ ಕಂಟೇನ್ಮೆಂಟ್ ಜೋನ್ ಇರುವುದಿಲ್ಲ. ಕೊರೋನಾ ಸೋಂಕಿತರ ಮನೆಯನ್ನೇ ಸೀಲ್ ಡೌನ್ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಒಂದಷ್ಟು ಸೋಂಕಿತರಿಗಾಗಿ ಇಡೀ ಪ್ರದೇಶವನ್ನೇ ಸೀಲ್ ಡೌನ್ ಮಾಡುವುದರಿಂದ ಅಥವಾ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸುವುದರಿಂದ ಆ ಪ್ರದೇಶದಲ್ಲಿರುವ ಎಲ್ಲರೂ ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಪ್ರದೇಶದ ಬದಲು ಸೋಂಕಿತರ ಮನೆಯನ್ನಷ್ಟೇ 14 ದಿನ ಸೀಲ್ ಡೌನ್ ಮಾಡಲಾಗುವುದು ಎಂದು ಸುಧಾಕರ್ ಮಂಗಳೂರಿನಲ್ಲಿ ಬುಧವಾರ ಹೇಳಿದರು.
ಕೇವಲ ಮಹಾರಾಷ್ಟ್ರದಿಂದ ಬಂದ ಎಲ್ಲರಿಗೂ ಟೆಸ್ಟ್ ಮಾಡಲಾಗುತ್ತಿದೆ. ಇನ್ನು ಮುಂದೆ ಲಕ್ಷಣ ಇದ್ದವರಿಗೆ ಮಾತ್ರ ಕೊರೋನಾ ಟೆಸ್ಟ್ ಮಾಡಲಾಗುವುದು. ಮಹಾರಾಷ್ಟ್ರದಿಂದ ಬಂದವರು ಮನೆಯಲ್ಲಿ ಕ್ವಾರಂಟೈನ್ ಇರಬೇಕು. ಅವರವರ ಮನೆಯಲ್ಲಿ ಕ್ವಾರಂಟೈನ್ ಆಗಬೇಕಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!