newsics.com
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ಗುರುವಾರ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಕಾರು ಧರ್ಮಸ್ಥಳದಿಂದ ರಿಪ್ಪನ್ ಪೇಟೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ರಿಪ್ಪನ್ ಪೇಟೆ ನಿವಾಸಿಗಳಾದ ಕಲಾವತಿ (65), ಲೋಹಿತ್ (36), ಶಶಾಂಕ್ (10) ಮೃತಪಟ್ಟವರು. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು
Follow Us