Saturday, April 17, 2021

ಯುವತಿಯೊಂದಿಗಿನ ವಿಡಿಯೋ: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

newsics.com

ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಯುವತಿಗೆ ಆಮಿಷವೊಡ್ಡಿ ಸಚಿವ ರಮೇಶ್ ಜಾರಕಿಹೊಳಿ ಆಕೆಯನ್ನು ಲೈಂಗಿಕವಾಗಿ ಬಳಕೆಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಿಹಳ್ಳಿ ಆರೋಪಿಸಿ ದೂರು ನೀಡಿದ್ದಾರೆ. ಯಾವುದೇ ನೌಕರಿ ಕೊಡಿಸದಿದ್ದರಿಂದ ಯುವತಿ ಕಂಗಾಲಾಗಿದ್ದಳು. ಇನ್ನೊಂದೆಡೆ ಯುವತಿ ಬಳಿ ವಿಡಿಯೋ ಇದ್ದ ಬಗ್ಗೆ ಸಚಿವರಿಗೆ ಗೊತ್ತಾಗಿತ್ತು. ಹಾಗಾಗಿ, ಸಂತ್ರಸ್ತ ಯುವತಿ, ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ದೂರು ನೀಡಬೇಕೇ ಬೇಡವೇ ಎಂದು ಯುವತಿ, ಕುಟುಂಬ ಸದಸ್ಯರು ಗೊಂದಲಕ್ಕೆ ಸಿಲುಕಿದ್ದರು. ಬಳಿಕ ಕುಟುಂಬ ಸದಸ್ಯರು ನನ್ನನ್ನು ಭೇಟಿಯಾಗಿದ್ದರು. ಹೀಗಾಗಿ ಸತ್ಯದ ಬಗ್ಗೆ ಗೊತ್ತಾಗಲಿ ಎಂದು ಪೋಲೀಸ್ ಆಯುಕ್ತರಿಗೆ ವಿಡಿಯೋ ಇರುವ ಸಿಡಿ ನೀಡಿ ದೂರು ದಾಖಲಿಸಲಾಗಿದೆ ಎಂದು ದಿನೇಶ್ ಹೇಳಿದ್ದಾರೆ.
ಇನ್ನೊಂದೆಡೆ ಯುವತಿಯೊಂದಿಗಿನ ವಿಡಿಯೋ ಬಯಲಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆ, ಲೋಕಸಭೆ ಟಿವಿ ಇನ್ನು ‘ಸಂಸದ್ ಟಿವಿ’

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!