newsics.com
ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಾನ ತಲ ಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವಕ್ಕೆ ಕ್ಷಣ ಗಣನೆ ಆರಂಭವಾಗಿದೆ.
ಮಧ್ಯಾಹ್ನ 1.11ಕ್ಕೆ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಕುಂಡಿಕೆಯಲ್ಲಿ ಕಾವೇರಿ ನದಿ ದರ್ಶನ ನೀಡಲಿದ್ದಾಳೆ.
ಈ ಬಾರಿ ಈ ದೃಶ್ಯ ವೀಕ್ಷಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ತಲಕಾವೇರಿಯಲ್ಲಿ ಸ್ನಾನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಭಾಗಮಂಡಲದಿಂದ ತಲಕಾವೇರಿಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಅಲ್ಲಿಂದ ನಡೆದುಕೊಂಡು ತಲಕಾವೇರಿ ತಲುಪಬೇಕು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನೇತೃತ್ವದಲ್ಲಿ ಎಲ್ಲ ಸಿದ್ದತೆ ಮಾಡಲಾಗಿದೆ.
ಕೇರಳದಲ್ಲಿ ಪ್ರವಾಹ, ಭೂ ಕುಸಿತ: 18 ಜನರ ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ