ಬೆಂಗಳೂರು: ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರಕರಣದ ತನಿಖೆಗೆ ಸಿಬಿಐ ಮುಂದಾಗಿದ್ದು, ಮಾಜಿಸಚಿವ ಕೆ.ಜೆ.ಜಾರ್ಜಗೆ ಸಮನ್ಸ್ ಜಾರಿಯಾಗಿದೆ.
ವಿಧಾನಸೌಧಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಖುದ್ದಾಗಿ ಜಾರ್ಜಗೆ ಸಮನ್ಸ್ ನೀಡಿದ್ದಾರೆ. ಮಂಗಳೂರಿನಲ್ಲಿ ಡಿವೈಎಸ್‍ಪಿಯಾಗಿದ್ದ ಗಣಪತಿ ಹಿರಿಯ ಅಧಿಕಾರಿಗಳು ಹಾಗೂ ಜಾರ್ಜ ವಿರುದ್ಧ ಆರೋಪ ಎಸಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಗಣಪತಿ ಸಂಶಯಾಸ್ಪದ ಸಾವು ಪ್ರಕರಣದ ತನಿಖೆ ತೃಪ್ತಿಕರವಾಗಿಲ್ಲ ಎಂದು ಗಣಪತಿ ಪುತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಮಗ್ರ ತನಿಖೆಗೆ ನ್ಯಾಯಾಲಯ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಗಣಪತಿ ಪ್ರಕರಣದ ತನಿಖೆ ಮರುಜೀವ ಪಡೆದುಕೊಂಡಿದ್ದು, ತನಿಖೆ ಅಂಗವಾಗಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಮಾಜಿ ಸಚಿವ ಜಾರ್ಜಗೆ ನೋಟಿಸ್ ಜಾರಿಮಾಡಿದೆ.
ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಮಾಜಿ ಸಚಿವ ಜಾರ್ಜಗೆ ಸಿಬಿಐ ನೋಟಿಸ್
Follow Us