ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ

Newsics.com ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ವಿಚಾರಣೆಗಾಗಿ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ, ಇದೀಗ ವಿನಯ ಕುಲಕರ್ಣಿಯನ್ನು ವಶಕ್ಕೆ ತೆಗೆದುಕೊಂಡಿದೆ. ಇಂದು ಮುಂಜಾನೆ ಧಾರವಾಡದ ಕಲ್ಯಾಣ ನಗರದಲ್ಲಿರುವ ಕುಲಕರ್ಣಿ ಅವರ ಮನೆಗೆ ಆಗಮಿಸಿದ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿಯನ್ನು ತಮ್ಮ ಜತೆ ಕರೆದುಕೊಂಡು ಹೋಗಿದ್ದಾರೆ. ಯೋಗಿಶ್ ಗೌಡ ಬಿಜೆಪಿ ನಾಯಕರಾಗಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ರಾಜಕೀಯ ದ್ವೇಷದಿಂದ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು