ಬೆಂಗಳೂರು: ಮಾದಕ ದ್ರವ್ಯ ಜಾಲದ ಕಿಂಗ್ ಪಿನ್ ವಿರೇನ್ ಖನ್ನಾ ನ ಸಂಪರ್ಕದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಹೋಟೆಲ್ ಗಳಿಗೆ ನೋಟಿಸ್ ನೀಡಿದ್ದಾರೆ. ವಿರೇನ್ ಖನ್ನಾ ಬೆಂಗಳೂರಿನ ಕೆಲವು ಪ್ರತಿಷ್ಟಿತ ಹೋಟೆಲ್ ಮತ್ತು ಪಬ್ ಗಳಲ್ಲಿ ಪಾರ್ಟಿ ಮಾಡುತ್ತಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿ ಮಾಡಲಾಗಿದೆ.
ಕ್ಲೌಡ್ ನೈನ್ ಸೇರಿದಂತೆ ನಗರದ ಹಲವು ಹೋಟೆಲ್ ಗಳಿಗೆ ಸಿಸಿಬಿ ನೋಟಿಸ್ ನೀಡಿದ್ದು, ಸಿಸಿಟಿವಿ ದೃಶ್ಯ ನೀಡುವಂತೆ ಸೂಚಿಸಿದೆ. ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ ಮಾದಕ ದ್ರವ್ಯ ಸೇವನೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಸಲು ಇದೀಗ ಸಿಸಿಟಿವಿ ದೃಶ್ಯಗಳ ಮೊರೆ ಹೋಗಿದೆ.
ಇನ್ನೊಂದೆಡೆ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿದೆ.