ಬೆಂಗಳೂರು: ಚಂದನವನದಲ್ಲಿ ತಲ್ಲಣ ಮೂಡಿಸಿರುವ ಮಾದಕ ದ್ರವ್ಯ ಜಾಲದ ತನಿಖೆ ಬಿರುಸುಪಡೆದುಕೊಂಡಿದೆ. ಈ ಸಂಬಂಧ ಸಿಸಿಬಿ ಇಂದು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಲಿದೆ. ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸಂಬರಗಿ ನಟಿ ಸಂಜನಾ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಶಾಸಕ ಜಮೀರ್ ಅಹಮ್ಮದ್ ಕೂಡ ಸಂಬರಗಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಸಂಬಂಧ ಪ್ರಕರಣ ಕೂಡ ದಾಖಲಿಸಲಾಗಿದೆ. ಇನ್ನೊಂದೆಡೆ ಬಂಧಿತ ವಿರೇನ್ ಖನ್ನಾ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ಸಂಗ್ರಹಿಸುತ್ತಿದೆ. ಖನ್ನಾ ನ ಆದಾಯದ ಮೂಲ ಪತ್ತೆ ಹಚ್ಚುವಲ್ಲಿ ಇ ಡಿ ನಿರತವಾಗಿದೆ