Wednesday, July 6, 2022

ಆ.20ರೊಳಗೆ ಸಿಇಟಿ ಫಲಿತಾಂಶ

Follow Us

ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಆ.20ರೊಳಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಹಿಂದಿನಂತೆಯೇ ನಡೆಯಲಿದೆ. ಸಿಇಟಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸೀಟು ಹಂಚಿಕೆಗೆ ಆನ್‌ಲೈನ್‌ ಕೌನ್ಸೆಲಿಂಗ್‌ ನಡೆಸುವುದಕ್ಕೂ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಸರ್ಕಾರದ ನಡುವಿನ ಸೀಟು ಹಂಚಿಕೆ ಕುರಿತು ವಾರದಲ್ಲಿ ತೀರ್ಮಾನಕ್ಕೆ ಬರಲಿದ್ದೇವೆ. ಈ ಪ್ರಕ್ರಿಯೆಯಲ್ಲಿ ಹೆಚ್ಚೇನೂ ವ್ಯತ್ಯಾಸ ಇರುವುದಿಲ್ಲ ಎಂದರು.
ವೃತ್ತಿಶಿಕ್ಷಣ ಕೋರ್ಸ್‌ಗಳ ಶುಲ್ಕ ಕಡಿಮೆ ಮಾಡುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಸಾಲಿನಲ್ಲಿ ಯಾವುದೇ ಕೋರ್ಸ್‌ಗಳ ಶುಲ್ಕ ಹೆಚ್ಚಿಸದಂತೆ ಆಡಳಿತ ಮಂಡಳಿಯವರಲ್ಲಿ ಕೋರುತ್ತೇನೆ ಎಂದು ಹೇಳಿದರು.
ಲಾಕ್‌ಡೌನ್‌ನಿಂದ ದೊಡ್ಡ ಬಹುರಾಷ್ಟ್ರೀಯ ಕಂಪನಿಗಳಿಗೆ ಅಷ್ಟೇನೂ ನಷ್ಟ ಉಂಟಾಗಿಲ್ಲ. ಆದರೆ, ನವೋದ್ಯಮಗಳು ಸಮಸ್ಯೆ ಎದುರಿಸುತ್ತಿವೆ. ಅವುಗಳ ಸಂಕಷ್ಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸ್ಪಂದಿಸಿವೆ. ನಷ್ಟದಲ್ಲಿರುವ ಉದ್ಯಮಗಳಿಗೆ ಸಾಲವನ್ನೂ ಒದಗಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಅಶ್ವತ್ಥನಾರಾಯಣ ತಿಳಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...
- Advertisement -
error: Content is protected !!