newsics.com
ಬೆಂಗಳೂರು: ನಗರದಲ್ಲಿ ಇಂದು(ಡಿ.27) ಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಐದು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಏರ್ಪೋರ್ಟ್ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ನಿಸಾನ್ ಕಂಪನಿಯ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅತ್ತ ಹಾರಿ ಹೋದದ್ದೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣ. ಈ ಕಾರು ನಿಯಂತ್ರಣ ತಪ್ಪಲು ಬೈಕ್ ಸವಾರರ ಜಾಲಿ ರೈಡ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಬೈಕ್ ಸವಾರರು ವಿಮಾನ ನಿಲ್ದಾಣದ ರಸ್ತೆಯಲ್ಲಿ ನಂದಿಬೆಟ್ಟದ ಕಡೆಗೆ ಜಾಲಿ ರೈಡ್ ಹೋಗುತ್ತಿದ್ದರು. ಈ ವೇಳೆ ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಯರ್ರಾಬಿರ್ರಿ ಚಲಾಯಿಸಿದ್ದರಿಂದಲೇ ಕಾರಿನ ಚಾಲಕ ನಿಯಂತ್ರಣ ತಪ್ಪಿರಬಹುದು ಎಂದು ಹೇಳಲಾಗಿದೆ. ಈ ಕಾರು ವಿಮಾನ ನಿಲ್ದಾಣದ ಕಡೆ ಹೊರಟಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆಯಿತು. ಚಾಲಕ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದರಿಂದ ಆ ಕಾರು ಇಂಡಿಕಾ ಕಾರಿಗೆ ನಂತರ ಆ ಕಾರು ಆಲ್ಟೋ ಸೇರಿದಂತೆ ಇತರೆ ಮೂರು ಕಾರುಗಳಿಗೆ ಡಿಕ್ಕಿಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಿಂದಾಗಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು.
ಆಹಾರ ಕೊಡಲಾರದ ದುಸ್ಥಿತಿ; 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!
ಕೊರೋನಾ ಕಾಲದಲ್ಲಿ ದೇಶದೆಲ್ಲೆಡೆ ಕಾಂಡೋಮ್’ಗೆ ಭಾರೀ ಬೇಡಿಕೆ!