newsics.com
ಬೆಂಗಳೂರು: ಹಿಂದಿ ಹೇರಿಕೆ ಹಾಗೂ ಹಿಂದಿ ದಿವಸ್ ಆಚರಣೆ ಬಗ್ಗೆ ನಟ ದರ್ಶನ್ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್, ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರಭಾಷೆ. ನಮ್ಮ ಕೊನೆ ಉಸಿರಿರುವರೆಗೂ ಕನ್ನಡದ ಪರವಾಗಿ ನಿಲ್ಲುತ್ತೇವೆ. ಕನ್ನಡವೇ ಸತ್ಯ. ಕನ್ನಡವೇ ನಿತ್ಯ ಎಂದಿದ್ದಾರೆ.
ಅಲ್ಲದೇ, ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಉತ್ತರದ ಯಾವುದೋ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಕಲೆಯನ್ನು ನಮ್ಮಿಂದ ಕಸಿದುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.
ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ.
— Darshan Thoogudeepa (@dasadarshan) September 15, 2020
ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ pic.twitter.com/YfnGUaTToL