Monday, April 12, 2021

KPSC ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಬದಲಾವಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಗೆಜೆಟೆಡ್ ಪ್ರೊಬೆಷನರಿ (ಗ್ರೂಪ್ ಎ ಮತ್ತು ಬಿ) ಹುದ್ದೆಗಳಿಗೆ ನಡೆಸುವ ಮುಖ್ಯ ಪರೀಕ್ಷೆಯ ಒಟ್ಟು ಅಂಕವನ್ನು 1750ರಿಂದ 1250ಕ್ಕೆ ಇಳಿಸಿದೆ.
ಅದೇ ರೀತಿ, ಈ ಹಿಂದೆ 200 ಅಂಕಗಳಿಗೆ ನಡೆಯುತ್ತಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ಈಗ 50 ಅಂಕಗಳಿಗೆ ಸೀಮಿತಗೊಳಿಸಲಾಗಿದೆ. ಅಭ್ಯರ್ಥಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕ ಶೇಕಡ 80 ದಾಟಿದರೆ ಅಥವಾ ಶೇಕಡ 40 ಕ್ಕಿಂತ ಕಡಿಮೆಯಾದರೆ ಸಂದರ್ಶನ ಮಂಡಳಿ ಸದಸ್ಯರು ಇದಕ್ಕೆ ಕಾರಣ ನೀಡಬೇಕಿದೆ.
ಈ ಹಿಂದೆ ಎರಡು ಐಚ್ಛಿಕ ವಿಷಯ ಸೇರಿ ಒಟ್ಟು ಏಳು ವಿಷಯಗಳಿಗೆ ಮುಖ್ಯ ಪರೀಕ್ಷೆ ನಡೆಯುತ್ತಿದ್ದು, ಈಗ 250 ಅಂಕಗಳ ಐಚ್ಛಿಕ ವಿಷಯಗಳನ್ನು ಕೈಬಿಡಲಾಗಿದೆ. ಹೀಗಾಗಿ ಮುಖ್ಯ ಪರೀಕ್ಷೆಯಲ್ಲಿ ಒಟ್ಟು 500 ಅಂಕಗಳನ್ನು ಕಡಿತಗೊಳಿಸಿದಂತಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!