ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ಐ ಕಿರಣ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ (ಜುಲೈ 31) ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಸಾವು-ಬದುಕಿನ ನಡುವೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಪಿಎಸ್’ಐ ಕಿರಣ್ ಗುರುವಾರ (ಜುಲೈ 30) ಮಧ್ಯರಾತ್ರಿ ಕೊಲೆ ಆರೋಪಿಯನ್ನು ಬಂಧಿಸಿ ಶುಕ್ರವಾರ ಬೆಳಗ್ಗೆ ಕಾನೂನು ಪ್ರಕ್ರಿಯೆ ಮುಗಿಸಿ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು.
ಕಿರಣ್ ಅವರು ಕಳೆದ ಒಂದು ವರ್ಷದಿಂದ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಪಿಎಸ್’ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಮೃತ ಪೊಲೀಸ್ ಅಧಿಕಾರಿಯ ಶವವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಚನ್ನರಾಯಪಟ್ಟಣದಲ್ಲಿ ಕೇವಲ ಎರಡು ದಿನಗಳಲ್ಲಿ ಎರಡು ಕೊಲೆಗಳು ನಡೆದಿದೆ. ಈ ಕೊಲೆಗಳ ತನಿಖೆ ತಂಡದಲ್ಲಿ ಕಿರಣ್ ಕುಮಾರ್ ಸಹ ಇದ್ದರು. ಸ್ಥಳಕ್ಕೆ ಎಎಸ್ಪಿ ನಂದಿನಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಆತ್ಮಹತ್ಯೆ
Follow Us