newsics.com
ಧಾರವಾಡ: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ವೆಂಟಿಲೇಟರ್ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡದ ಎಸ್ ಡಿ ಎಂ ಮೆಡಿಕಲ್ ಕಾಲೇಜು ಈ ಸಂಬಂಧ ಹೆಲ್ತ್ ಬುಲೆಟಿನ್ ಪ್ರಕಟಿಸಿದೆ.
ಚೆನ್ನವೀರ ಕಣವಿ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಜತೆಗೆ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.
ಚೆನ್ನವೀರ ಕಣವಿ ಅವರ ಆರೋಗ್ಯ ವೆಚ್ಚ ರಾಜ್ಯ ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.