Monday, April 12, 2021

ಸೋಂಕು ಹೆಚ್ಚಳ; ಚಿಕ್ಕಪೇಟೆ, ಕನಕಪುರ ಸ್ವಯಂಪ್ರೇರಿತ ಲಾಕ್’ಡೌನ್

ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಕ್ಕಪೇಟೆ ಮತ್ತು ರಾಮನಗರ ಜಿಲ್ಲೆಯ ಕನಕಪುರ ಟೌನ್ ಸ್ವಯಂಪ್ರೇರಿತವಾಗಿ ಲಾಕ್ ಡೌನ್ ಆಗಲಿದೆ.
ಇದು ಸರ್ಕಾರದ ನಿರ್ಧಾರವಲ್ಲ. ಆದರೆ, ಸಾರ್ವಜನಿಕರು, ವ್ಯಾಪಾರಸ್ಥರು ಮತ್ತು ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆ ಸೋಮವಾರದಿಂದ (ಜೂನ್ 22) ಭಾನುವಾರದ (ಜೂನ್ 28) ವರೆಗೆ ವ್ಯಾಪಾರಿಗಳೇ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಲು ನಿಶ್ಚಯಿಸಿದ್ದಾರೆ. ಚಿಕ್ಕಪೇಟೆ ಪ್ರದೇಶದಲ್ಲಿ 25 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಕನಕಪುರ ಪಟ್ಟಣವನ್ನೂ ನಾಳೆಯಿಂದ 9 ದಿನಗಳ ಕಾಲ (ಜೂನ್ 30ರವರೆಗೆ) ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಸ್ಥಳೀಯ ಶಾಸಕ ಮತ್ತು ಕೆಪಿಸಿಸಿ ನಿಯೋಜಿತ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!