newsics.com
ನವದೆಹಲಿ: ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಸೇರಿದಂತೆ ಏಳು ಹೈಕೋರ್ಟ್ ಗಳ ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ ಗಳಿಗೆ ವರ್ಗಾವಣೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಶಿಫಾರಿಸಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ಅಕ್ಟೋಬರ್ 5ರಂದು 11 ಹೈಕೋರ್ಟ್ ಗಳ 15 ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ ನ್ಯಾಯಮೂರ್ತಿ ರಾಜನ್ ಗುಪ್ತಾ ಹಾಗೂ ರಾಜಸ್ಥಾನ ಹೈಕೋರ್ಟ್ ನ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರನ್ನು ಪಟ್ನಾ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನು ಕಲ್ಕತ್ತಾ ಹೈಕೋರ್ಟ್ ಗೆ, ಹಿಮಾಚಲ ಪ್ರದೇಶ ಹೈಕೋರ್ಟ್ ನ ನ್ಯಾಯಮೂರ್ತಿ ಸುರೇಶ್ವರ್ ಠಾಕೂರ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ, ತೆಲಂಗಾಣ ಹೈಕೋರ್ಟ್ನ ನ್ಯಾಯಮೂರ್ತಿ ಟಿ ಅಮರನಾಥ ಗೌಡ್ ಅವರನ್ನು ತ್ರಿಪುರಾ ಹೈಕೋರ್ಟ್ ಗೆ ಹಾಗೂ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಸುಭಾಷ್ ಚಂದ್ ಅವರನ್ನು ಜಾರ್ಖಂಡ್ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ.
17 ವರ್ಷಗಳಿಂದ ಅಂಬಾಸಿಡರ್ ಕಾರಿನೊಂದಿಗೆ ಕಾಡಿನಲ್ಲೇ ವಾಸಿಸುತ್ತಿರುವ ವ್ಯಕ್ತಿ