ಬೆಂಗಳೂರು; ರಾಜ್ಯದಲ್ಲಿ ಸುದೀರ್ಘ ಅವಧಿಯಿಂದ ಬಾಕಿ ಉಳಿದಿದ್ದ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಒಟ್ಟು 10 ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಖಾತೆ ಹಂಚಿಕೆ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ರವಾನಿಸಿದ್ದ ಪಟ್ಟಿಯನ್ನು ಅಂಗೀಕರಿಸಿರುವ ರಾಜ್ಯಪಾಲ ವಜೂಭಾಯಿ ವಾಲಾ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆ …
ರಮೇಶ್ ಜಾರಕಿಹೊಳಿ- ಜಲಸಂಪನ್ಮೂಲ ಇಲಾಖೆ
ಬಿ.ಸಿ.ಪಾಟೀಲ್- ಅರಣ್ಯ
ಎಸ್.ಟಿ.ಸೋಮಶೇಖರ್- ಸಹಕಾರ
ಬಿ.ಎ.ಬಸವರಾಜು- ನಗರಾಭಿವೃದ್ಧಿ
ಡಾ.ಕೆ.ಸುಧಾಕರ್- ವೈದ್ಯಕೀಯ ಶಿಕ್ಷಣ
ಕೆ.ಗೋಪಾಲಯ್ಯ- ಸಣ್ಣ ಕೈಗಾರಿಕೆ
ಶಿವರಾಮ್ ಹೆಬ್ಬಾರ್- ಕಾರ್ಮಿಕ
ಶ್ರೀಮಂತ ಪಾಟೀಲ್- ಜವಳಿ ಮತ್ತು ಕೈಗಾರಿಕೆ
ನಾರಾಯಣ ಗೌಡ- ಪೌರಾಡಳಿತ,ತೋಟಗಾರಿಕೆ
ಆನಂದ್ ಸಿಂಗ್- ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ