Newsics.com
ಚಿಕ್ಕಬಳ್ಳಾಪುರ: ರಾಜ್ಯದ ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿದೆ. ಸ್ಫೋಟದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಡಿನಲ್ಲಿ ಸ್ಫೋಟಕಗಳನ್ನು ನಾಶಪಡಿಸುವ ವೇಳೆ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಇದೇ ವೇಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಪ್ರಕರಣದ ಸಮಗ್ರ ತನಿಖೆಗೆ ಸೂಚಿಸಿದರು.
ಘಟನಾ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ