Saturday, April 17, 2021

ಚಿರು ಇನ್ನು ನೆನಪು ಮಾತ್ರ

ಬೆಂಗಳೂರು: ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಟ ಧ್ರುವ ಸರ್ಜಾ ಆವರ ಫಾರ್ಮ್ ಹೌಸ್ ನಲ್ಲಿ ಸೋಮವಾರ ನೆರವೇರಿತು. ಅಕಾಲಿಕವಾಗಿ ಸಾವನ್ನಪ್ಪಿದ ಚಿರು ಪಂಚಭೂತಗಳಲ್ಲಿ ಲೀನವಾದರು.
ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ ನಲ್ಲಿ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹಿಂದೂ ಸಂಪ್ರದಾಯದಂತೆ ಚಿರಂಜೀವಿ ಸರ್ಜಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ತೀವ್ರ ಹೃದಯಾಘಾತದಿಂದ ಭಾನುವಾರ ಬೆಂಗಳೂರಿನ ಅಪೋಲೋ ಸಾಗರ್ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದರು. 1980 ರಂದು ಅಕ್ಟೋಬರ್​ 17ರಂದು ಬೆಂಗಳೂರಿನಲ್ಲಿ ಜನಿಸಿದ್ದ ಅವರು, ಹಿರಿಯ ನಟ ಶಕ್ತಿ ಪ್ರಸಾದ್ ಅವರ​ ಮೊಮ್ಮಗ ಮತ್ತು ನಟ ಅರ್ಜುನ್​ ಸರ್ಜಾ ಅಳಿಯ. ಬಾಲ್ಡವಿನ್​ ಬಾಲಕರ ಹೈ ಸ್ಕೂಲ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ಬಳಿಕ ವಿಜಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. 4 ವರ್ಷ ಅರ್ಜುನ್​ ಸರ್ಜಾ ಜತೆ ಸಹ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!