Tuesday, April 13, 2021

ಬೆಂಗಳೂರಿನಲ್ಲಿ ಲಾಕ್ ಡೌನ್: ನಗರ ಶಾಸಕರ ಸಭೆ ಕರೆದ ಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು  ಲಾಕ್ ಡೌನ್ ಮತ್ತೆ ಹೇರಬೇಕೇ ಎಂಬ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ನಗರದ ಎಲ್ಲ ಶಾಸಕರ ಸಭೆ ಕರೆದಿದ್ದಾರೆ. ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. ಈ ಎಲ್ಲ ಶಾಸಕರನ್ನು ಸಭೆಗೆ ಆಮಂತ್ರಿಸಲಾಗಿದೆ. ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಒಂದೇ ಮಾರ್ಗ ಎಂಬ ತೀರ್ಮಾನಕ್ಕೆ ಹಲವು ಶಾಸಕರು ಬಂದಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾಳೆಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.  ಇದೇ ವೇಳ  ಸರ್ಕಾರ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!