Wednesday, July 6, 2022

ಬಿಎಸ್’ವೈಗೆ 8-10 ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಸಾಧ್ಯತೆ

Follow Us

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸ್ವಲ್ಪ ಕಫ ಇದೆ, ಬೇರೆ ಸಮಸ್ಯೆಯೇನೂ ಕಂಡುಬಂದಿಲ್ಲ ಎಂದು ಸ್ವತಃ ವೈದ್ಯರಾಗಿರುವ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಇನ್ನೂ 8 ರಿಂದ 10 ದಿನ ಅವರು ಆಸ್ಪತ್ರೆಯಲ್ಲಿ ಇರಬೇಕಾಗಿ ಬರಬಹುದು ಎಂದೂ ಅವರು ಹೇಳಿದ್ದಾರೆ. ಕಳೆದ ವಾರದಿಂದ ಹಲವು ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪನವರ ಜೊತೆ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಿ ಅವರೆಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗುವುದು. ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು, ಅಲ್ಲಿಯವರೆಗೆ ಸ್ವ ಕ್ವಾರಂಟೈನ್ ಗೆ ಒಳಗಾಗುವುದು ಉತ್ತಮ. ಇತ್ತೀಚೆಗೆ ಕಾರ್ಯಕ್ರಮಗಳಲ್ಲಿ ಅವರ ಸಂಪರ್ಕಕ್ಕೆ ಬಂದವರು ಕೂಡ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ತಮ್ಮ ಕಚೇರಿ ಸಿಬ್ಬಂದಿಗಳಲ್ಲಿ ಕೆಲವರಿಗೆ ಸೋಂಕು ಬಂದಿರುವ ಹಿನ್ನೆಲೆಯಲ್ಲಿ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...

ಗೃಹ ಬಳಕೆ ಸಿಲಿಂಡರ್ ದರ ಮತ್ತೆ 50 ರೂಪಾಯಿ ಹೆಚ್ಚಳ

newsics.com ನವದೆಹಲಿ: ತೈಲ ಸಂಸ್ಥೆಗಳು ಎಲ್ ಪಿ ಜಿ ಬಳಕೆದಾರರಿಗೆ ಶಾಕ್ ನೀಡಿವೆ. ಗೃಹ ಬಳಕೆಯ ಸಿಲಿಂಡರ್ ದರ ಮತ್ತೆ ಹೆಚ್ಚಳ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಿಸಲಾಗಿದೆ.  ನೂತನ ದರ...
- Advertisement -
error: Content is protected !!