ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಿಗದಿಯಾಗಿದ್ದ ಬಳ್ಳಾರಿ ಮತ್ತು ವಿಜಯಪುರ ಪ್ರವಾಸ ರದ್ದುಗೊಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಅದಕ್ಕೆ ಪೂರ್ವಭಾವಿಯಾಗಿ ಸಿದ್ದಪಡಿಸಬೇಕಾದ ಕಾರ್ಯತಂತ್ರಗಳಿಗೆ ಒತ್ತು ನೀಡಲು ಸಿಎಂ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರತಿಯೊಂದು ಸಮಾಜದ ಮುಖಂಡರು ತಮ್ಮ ಶಾಸಕರ ಪರವಾಗಿ ಒತ್ತಡ ಹೇರುತ್ತಿದ್ದು, ಇದು ಸಮಸ್ಯೆಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ