ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1.09 ಲಕ್ಷ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಭಾನುವಾರ ಉಚಿತ ಲ್ಯಾಪ್ಟಾಪ್ ವಿತರಿಸಲಾಯಿತು.
ಉನ್ನತ ಶಿಕ್ಷಣ ಇಲಾಖೆ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ 8 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು.