newsics.com
ಬೆಂಗಳೂರು: ರೈತರ ಜತೆಗಿನ ಸಿಎಂ ಯಡಿಯೂರಪ್ಪ ಅವರ ಸಂಧಾನ ಸಭೆ ವಿಫಲವಾಗಿದೆ. ಹೀಗಾಗಿ ಸೆಪ್ಟೆಂಬರ್ 28 ರ ಸೋಮವಾರ ರೈತಸಂಘಟನೆಗಳು ಕರೆನೀಡಿರುವ ಕರ್ನಾಟಕ ಬಂದ್ ನಡೆಯುವುದು ಬಹುತೇಕ ಖಚಿತವಾಗಿದೆ.
ರೈತ ವಿರೋಧಿ ಎಪಿಎಂಸಿ ತಿದ್ದುಪಡಿ ಮಸೂದೆ ಸೇರಿದಂತೆ ವಿವಿಧ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 28ರ ಸೋಮವಾರ ರೈತಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇಂತಹ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಸಂಧಾನ ಸಭೆ ನಡೆಸಿದರು. ಆದರೆ ರೈತರು ಎಪಿಎಂಸಿ ತಿದ್ದುಪಡಿ ಕಾಯ್ದೆ ಕೈಬಿಡುವಂತೆ ಮಾಡಿದ ಮನವಿಗೆ ಸಿಎಂ ಪರಿಶೀಲಿಸಿ ಕ್ರಮ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಇದಕ್ಕೆ ರೈತ ಮುಖಂಡರು ಒಪ್ಪಿಲ್ಲ ಎನ್ನಲಾಗಿದೆ.
ಸಿಎಂ ಸಂಧಾನ ಸಭೆ ವಿಫಲ; 28ರ ಕರ್ನಾಟಕ ಬಂದ್ ಬಹುತೇಕ ಖಚಿತ
Follow Us